ಡಿವೈಡರ್‌ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರು ;ರಜೆಗೆಂದು ಊರಿಗೆ ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸುಟ್ಟು ಕರಕಲು

ಧಾರವಾಡ: ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನವಾಗಿದ್ದಾರೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡ್ ಗೆ
ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.ಕಾರು ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್‌ಪೆಕ್ಟರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಬೆಂಕಿ ಹೋಗಿದ್ದಾರೆ.
ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್‌ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಇನ್ಸೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!