
ಸಕಲೇಶಪುರ: 2ನೇ ವರ್ಷದ ಕ್ರಾಫರ್ಡ್ ಅಫಿಶೀಯಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಪಟ್ಟಣದಲ್ಲಿ ಈ ಬಾರಿಯೂ ಆಯೋಜಿಸಲಾಗಿದ್ದು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಕ್ರಾಫರ್ಡ್ ಆಸ್ಪತ್ರೆ ಕ್ಷಕಿರಣ ವಿಭಾಗದ ವ್ಯವಸ್ಥಾಪಕ ರಘು ಹೇಳಿದ್ದಾರೆ.
ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಆರೋಗ್ಯವೇ ಭಾಗ್ಯ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯಗತ್ಯ ಈ ನಿಟ್ಟಿನಲ್ಲಿ ಕ್ರಾಫರ್ಡ್ ಆಸ್ಪತ್ರೆ ವತಿಯಿಂದ ಪಟ್ಟಣದ ಸುಭಾಷ್ ಮೈದಾನದಲ್ಲಿ ದಿನಾಂಕ 13-12-2025 ಹಾಗೂ 14-12-2025ರಂದು ಎರಡು ದಿನಗಳ ಕಾಲ ಲೀಗ್ ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರತಿ ತಂಡಕ್ಕೂ 5000 ರೂ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದ್ದು, ಪ್ರಥಮ ಬಹುಮಾನ 30000/- ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 20000/- ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ 10000/- ನಗದು ಹಾಗೂ ಆಕರ್ಷಕ ಟ್ರೋಫಿ,ನಾಲ್ಕನೇ ಬಹುಮಾನ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಒಟ್ಟು 20 ವಿವಿಧ ಇಲಾಖೆಗಳ ತಂಡಗಳು ಭಾಗವಹಿಸಲಿದ್ದು ಮೊದಲ ದಿನ 10 ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಎರಡು ಅಂಕಣಗಳಲ್ಲಿ ಆಡಳಿದೆ. ಎರಡನೇ ದಿನ ಇನ್ನುಳಿದ 10 ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಎರಡು ಅಂಕಣಗಳಲ್ಲಿ ಆಡಳಿದೆ. ಒಟ್ಟಾರೆಯಾಗಿ ಮೊದಲ ದಿನ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಹಾಗೂ ಎರಡನೇ ದಿನ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಪರಸ್ಪರವಾಗಿ ಸೆಣೆಸಲಿವೆ. ಶನಿವಾರ ಬೆಳಿಗ್ಗೆ 9 ಗಂಟೆಗೆ ಕ್ರಾಫರ್ಡ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಗಣ್ಯರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಭಾನುವಾರ ಸಂಜೆ 5.30 ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಕ್ರಾಫರ್ಡ್ ಆಸ್ಪತ್ರೆಯ ಎಲ್ಲಾ ವೈದ್ಯರು ಉಪಸ್ಥಿತರಿರುವರು.ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದ್ದಾರೆ.
