
ಹಾಸನ:ಹೊಸ ವರ್ಷದ ಮೊದಲ ದಿನವೇ ಅರಸೀಕೆರೆಯ ಚಿಕ್ಕಾರಹಳ್ಳಿ ಗೋಶಾಲೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಡಿಕೆ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ.
ಮೃತರನ್ನು ಕಡೂರು ತಾಲೂಕಿನ ತಂಗ್ಲಿ ಗ್ರಾಮದ ಶಬ್ಬೀರ್ (55), ತಿಮ್ಮಣ್ಣ (53), ಸಂಜಯ್ (45) ಎಂದು ಗುರುತಿಸಲಾಗಿದೆ.
