ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆ

ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆ.

(ಬೆಳೆಗಾರರ ಬದುಕಿಗೆ ಬ್ಯಾಂಕ್–ಬಸ್ ಅಗತ್ಯ:  ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ಮಾಸಿಕ ಸಭೆಯಲ್ಲಿ ಮಹತ್ವದ ಚರ್ಚೆ.)


ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ  ಬೆಳೆಗಾರರ ಸಂಘದ 14ನೇ ಮಾಸಿಕ ಸಭೆ ಶುಕ್ರವಾರ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ವಿ.ಪಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರಿಗೆ ಅನುಕೂಲವಾಗುವಂತೆ ಒಂದು ಬ್ಯಾಂಕ್ ಶಾಖೆಯನ್ನು ಸ್ಥಾಪಿಸುವ ಕುರಿತು ಸಂಘದ ವತಿಯಿಂದ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. ಬೆಳೆಗಾರರು ಬ್ಯಾಂಕಿಂಗ್ ಸೇವೆಗಳಿಗಾಗಿ ದೂರ ಪ್ರಯಾಣ ಮಾಡುವ ಅನಿವಾರ್ಯತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಬ್ಯಾಂಕ್ ಶಾಖೆ ಅಗತ್ಯವೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಇದೇ ಸಂದರ್ಭದಲ್ಲಿ ಪ್ರತಿನಿತ್ಯ ಬೆಳಗ್ಗೆ ಬೆಂಗಳೂರು–ಅರಕಲಗೂಡು ಮಾರ್ಗವಾಗಿ ಮಂಗಳೂರು ತಲುಪುವ ನೇರ ಬಸ್ ವ್ಯವಸ್ಥೆ ಕಲ್ಪಿಸುವ ಅಗತ್ಯತೆ ಕುರಿತಂತೆ ಚರ್ಚೆ ನಡೆಸಲಾಯಿತು. ಈ ಸಂಬಂಧ ಬೆಳೆಗಾರರ ಸಂಘ ಹಾಗೂ ಗ್ರಾಮ ಪಂಚಾಯಿತಿ ಒಟ್ಟಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ನಂತರ ಸಂಘದ ಖಜಾಂಚಿಯವರು ತಿಂಗಳ ಆದಾಯ–ವ್ಯಯ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿ ಅನುಮೋದನೆ ಪಡೆದುಕೊಂಡರು.

ಸಭೆಯ ವೇದಿಕೆಯಲ್ಲಿ ಬೆಳೆಗಾರರ ಸಂಘದ ಖಜಾಂಚಿ ಹೂವಣ್ಣ ಗೌಡ, ಕಾರ್ಯದರ್ಶಿ ಅರುಣ್ ಗೌಡ ಕರಡಿಗಾಲ, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!