ಕೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ –   ಜಾಗೃತಿ ಕಾರ್ಯಕ್ರಮ.

ಕೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ –   ಜಾಗೃತಿ ಕಾರ್ಯಕ್ರಮ.


ಸಕಲೇಶಪುರ:ತಾಲ್ಲೂಕಿನ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮಿ ಪ್ರೇಮ್ ಕುಮಾರ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟನೆಮಾಡಿ ಮಾತನಾಡಿದ ಲಕ್ಷ್ಮಿಪ್ರೇಮಕುಮಾರ್ ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸುರಕ್ಷತೆ ಹಾಗೂ ಸಮಾನ ಹಕ್ಕುಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಾಲಕಿಯರು ಆತ್ಮವಿಶ್ವಾಸದಿಂದ ಸಮಾಜದಲ್ಲಿ ಮುಂದೆ ಬರಬೇಕು. ಶಿಕ್ಷಣವೇ ಅವರ ಶಕ್ತಿಯಾಯುಧ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜು ಟಿ.ಅವರು ಮಾತನಾಡಿ, ಹೆಣ್ಣು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು, ಪೋಷಕರು ಹಾಗೂ ಸಮಾಜದ ಒಗ್ಗಟ್ಟಿನ ಪ್ರಯತ್ನ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಶಿಕ್ಷಕರ ಸಂಘದ  ಪ್ರಧಾನ ಕಾರ್ಯದರ್ಶಿ ದೊರೇಶ್, ಕೊಲ್ಲಹಳ್ಳಿ ಶಾಲೆಯ ಶಿಕ್ಷಕಿ ಸುನಿತಾ, ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!