







ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ (ರಿ), ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ, ಮಾತೃಶ್ರೀ ಹೇಮಾವತಿ ಅಮ್ಮನವರ ಅತ್ಯಂತ ಪ್ರೀತಿಯ ಕಾರ್ಯಕ್ರಮವಾದ, ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಗುರುವಾರ ವಾತ್ಸಲ್ಯ ಫಲಾನುಭವಿಗಳಿಗೆ, ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರುಗಳು, ಊರಿನ ಗಣ್ಯರು, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು , ಜ್ಞಾನವಿಕಾಸ ಸಮನ್ವಯಧಿಕಾರಿ ಉಪಸ್ಥಿತರಿದ್ದರು.
ವಾತ್ಸಲ್ಯ ಕಿಟ್ ಪಡೆದ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿ, ಮಾತೃಶ್ರೀ ಅಮ್ಮನವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
