ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ

ಮಂಗಳೂರು : ತಮಿಳುನಾಡು ಮುಖ್ಯಮಂತ್ರಿಜೋಸೆಫ್ ವಿಜಯ್ ಅವರು ಜೂನ್ 12ರಂದುಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡಲಿದ್ದಾರೆ.ವಿಜಯ್‌ ಅವರು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೇವರ ದರ್ಶನ ನೆರವೇರಿಸಿದ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಜಯ್ ಅವರಿಗೆ ‘Z+’ ವರ್ಗದ ಭದ್ರತೆ ಕಲ್ಪಿಸಲಾಗಿರುವಹಿನ್ನೆಲೆಯಲ್ಲಿ ಅವರ ಭೇಟಿ ಸಂದರ್ಭದಲ್ಲಿ ವ್ಯಾಪಕಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ತಮಿಳುನಾಡು ಸಿಐಡಿಭದ್ರತಾ ವಿಭಾಗವು ಕರ್ನಾಟಕ ಪೊಲೀಸರಿಗೆ ಮನವಿಮಾಡಿದೆ. ಕರ್ನಾಟಕದಲ್ಲಿಯೂ ವಿಜಯ್ ಅವರಿಗೆಸಾಕಷ್ಟು ಅಭಿಮಾನಿ ಬಳಗವಿರುವುದರಿಂದ, ಅವರುಸಂಚರಿಸುವ ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆಇದೆ ಎಂದು ಅಂದಾಜಿಸಲಾಗಿದೆ. ಸಂಚಾರ ದಟ್ಟಣೆನಿಯಂತ್ರಣ ಹಾಗೂ ಭದ್ರತಾ ದೃಷ್ಟಿಯಿಂದ ಅಗತ್ಯಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಸೂಚಿಸಲಾಗಿದೆ.

ಇದಲ್ಲದೆ, ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೊನೆಯ30ರಿಂದ 40 ಕಿಲೋಮೀಟರ್ ರಸ್ತೆ ಮಾರ್ಗವುಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಸೌಪರ್ಣಿಕಾನದಿ ಪಾತ್ರ ಹಾಗೂ ದಟ್ಟ ಅರಣ್ಯ ಪ್ರದೇಶಗಳ ಮೂಲಕಹಾದುಹೋಗುವುದರಿಂದ, ಸಂಶಯಾಸ್ಪದಚಟುವಟಿಕೆಗಳು ಮತ್ತು ಕಾಡುಪ್ರಾಣಿಗಳಚಲನವಲನಗಳ ಮೇಲೆ ನಿಗಾ ಇಡಲು ಪೊಲೀಸ್ಇಲಾಖೆಯೊಂದಿಗೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೂನಿಯೋಜಿಸಲು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!