ಭೀಕರ ರಸ್ತೆ ಅಪಘಾತ ತಂಬಲಗೇರಿ ಯುವಕ ಮೃತ್ಯು

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ನಡುವಿನ ಗಡಿಯಾರ ಎಂಬ ಸ್ಥಳದಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತ ಸಂಭವಿಸಿದೆ.ಮಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸಕಲೇಶಪುರ ತಾಲೂಕಿನ ತಂಬಲಗೆರೆ ಗ್ರಾಮದ ಯುವಕ ಲಕ್ಷ್ಮಿಕಾಂತ್ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಭಾರೀ ಸದ್ದು ಕೇಳಿಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತದ ತೀವ್ರತೆಗೆ KA-12 N-6668 ಸಂಖ್ಯೆಯ ಕಾರು ಸಂಪೂರ್ಣ ಜಖಂಗೊಂಡಿದೆ.ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದು, ಗಾಯಗೊಂಡ ಮೂವರನ್ನು ತಕ್ಷಣವೇ ಮಂಗಳೂರಿನ ಫಾದರ್ ಮುಲ್ಲರ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!