ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ನೇತೃತ್ವದಲ್ಲಿ ದಾಳಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲೋಡ್ ಹವಳಿಗೆ ಬಿಲ್ಲೆಟ್ಸ್ ಹಾಗೂ ವಾಹನ ವಶ

ಸಕಲೇಶಪುರ : ಅರಣ್ಯ ಸಂಪತ್ತು ರಕ್ಷಣೆಗೆ ಮುಂದಾಗಿರುವ ಅರಣ್ಯ ಇಲಾಖೆಯು ಖಚಿತ ಮಾಹಿತಿ ಆಧರಿಸಿ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲೋಡ್ ಹವಳಿಗೆ ಬಿಲ್ಲೆಟ್ಸ್ ಹಾಗೂ ವಾಹನವನ್ನು ವಶಪಡಿಸಿಕೊಂಡಿದೆ. ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಅರ್ಜುನ್, ಮಂಜುನಾಥ್,ಕುಮಾರ್, ಉಮೇಶ್ ರವರ ತಂಡ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಈ ಕಾರ್ಯಾಚರಣೆ ಕೈಗೊಂಡಿತು. ದಾಳಿ ಸಮಯದಲ್ಲಿ ತಂಡವು KA-19A C.7767 ಸಂಖ್ಯೆಯ ಕಂಟೇನರ್ ರೀತಿಯ ವಾಹನದಲ್ಲಿ ಅಕ್ರಮವಾಗಿ ಒಂದು ಲೋಡ್ ಹವಳಿಗೆ ಬಿಲೆಟ್ಸ್ ಅನ್ನು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ವಾಹನ ಸಮೇತ ವಶಪಡಿಸಿಕೊಂಡು, ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ವಾಹನವು ಈಗಾಗಲೇ ಎರಡು ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!