ಒಲಂಪಿಯಾಡ್ ಪರೀಕ್ಷೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

​ಒಲಿಂಪಿಯಾಡ್ ಪರೀಕ್ಷೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ:

ಆಲೂರು :​ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ವತಿಯಿಂದ ಸಕಲೇಶಪುರ,ಆಲೂರು, ಬೇಲೂರು ವಲಯದ ಸಿ.ಎಸ್. ಸಿ ಕೇಂದ್ರದಲ್ಲಿ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆ ನಡೆಸಲಾಯಿತು. ಪ್ರಥಮ ಬಾರಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟಾರೆಯಾಗಿ 305 ವಿದ್ಯಾರ್ಥಿಗಳಲ್ಲಿ ಶೇ 90% ರಷ್ಟು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಿ.ಎಸ್.ಸಿ ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ, ಹಾಸನ ಜಿಲ್ಲಾ ನಿರ್ದೇಶಕರು ಮಹಾಬಲ ಕುಲಾಲ್ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಒಲಂಪಿಯಾಡ್ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.​ಪ್ರಮಾಣ ಪತ್ರ ವಿತರಣೆ ಮಾಡಿ ನಂತರ ಮಾತನಾಡಿದ CSC ಪ್ರಾದೇಶಿಕ ನಿರ್ದೇಶಕರು ಒಲಿಂಪಿಯಾಡ್ ಪರೀಕ್ಷೆ 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ. ಈ ಪರೀಕ್ಷೆ ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನ, ಗಣಿತ, ವಿಜ್ಞಾನ ವಿಷಯಗಳಲ್ಲಿ ನಿಯಮಗಳನ್ನು ರಾಷ್ಟ್ರದಾದ್ಯಂತ ನಡೆಸಲಾಗುತ್ತದೆ. ಈ ಪರೀಕ್ಷೆ ಕೇವಲ ಶಾಲಾ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ವಿದ್ಯಾರ್ಥಿಗಳ ಆಳವಾದ ಜ್ಞಾನ ಮೌಲ್ಯಮಾಪನ ಮಾಡುವ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎದುರಿಸುವ ಈಗಿನ ವಿದ್ಯಾರ್ಥಿಗಳಲ್ಲಿ ಸಹಕಾರವಾಗುತ್ತದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ವಿಷಯಗಳನ್ನು ಮತ್ತು ಅವರ ಪ್ರತಿಭೆಗಳನ್ನು ಗುರುತಿಸಲು ನೆರವಾಗುತ್ತದೆ ಎಂದು ತಿಳಿಸಿದರು.​ಪ್ರಮಾಣ ಪತ್ರ ವಿತರಣೆಯ ಸಂದರ್ಭದಲ್ಲಿ CSC ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ , ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ , ಸಿ. ಎಸ್. ಸಿ ಯೋಜನಾಧಿಕಾರಿ ಸೋಮಶೇಖರ್, ಜಿಲ್ಲಾ ಎಮ್. ಐ. ಎಸ್ ಯೋಜನಾಧಿಕಾರಿ ರಾಮಣ್ಣ, ಕ್ಷೇತ್ರ ಯೋಜನಾಧಿಕಾರಿ ರತ್ನಾಕರ್ ತಾಲೂಕು ನೋಡಲ್ಗಳಾದ ಪ್ರದೀಪ್, ಓಂಕಾರ್, ಜಯಪ್ರಸಾದ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!