ಶೆಟ್ಟಿಹಳ್ಳಿ ಚರ್ಚ್ ಸಮೀಪ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಹಾಸನ:ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ದಾರುಣ ಘಟನೆ ಸಂಭವಿಸಿದ್ದು, ಈಜಲು ನೀರಿಗೆ ಇಳಿದಿದ್ದ ಮೂವರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.ಮೃತರನ್ನು ಬೆಂಗಳೂರು ಮೂಲದ ಮಿಲನ್ (23), ಚರಂಗ್ (20) ಹಾಗೂ ಮಣಿಕಂಠ (20) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದ ಯುವಕರ ತಂಡ ವಾಪಸ್‌ ಬರುವಾಗ ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಆಗಮಿಸಿತ್ತು. ಈ ವೇಳೆ ಕೆಲವರು ನೀರಿನಲ್ಲಿ ಈಜಲು ಇಳಿದಿದ್ದು, ಆಕಸ್ಮಿಕವಾಗಿ ನೀರಿನ ಆಳಕ್ಕೆ ಸಿಲುಕಿ ಮೂವರು ಯುವಕರು ಮುಳುಗಿದ್ದಾರೆ ಎನ್ನಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಮೂವರ ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಳ್ಳಲಾಯಿತು.ಯುವಕರ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!