ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ 2 ಲಕ್ಷ ಅನುದಾನ

ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ₹2 ಲಕ್ಷ ಅನುದಾನವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ. ನವೀನ್ ಚಂದ್ರ ಶೆಟ್ಟಿಯವರು ದೇವಸ್ಥಾನ ಸಮಿತಿಗೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿದ್ದು, ಜೀರ್ಣಾವಸ್ಥೆಯಲ್ಲಿರುವ ದೇವಾಲಯಗಳ ಪುನರುಜ್ಜೀವನಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. “ದೇವಸ್ಥಾನವು ಕೇವಲ ಪೂಜಾ ಸ್ಥಳವಾಗಿ ಉಳಿಯದೆ, ಇಲ್ಲಿ ಭಜನಾ ತಂಡವನ್ನು ಪ್ರಾರಂಭಿಸಿ ನಿತ್ಯ ಭಜನೆ ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ನಡೆಸಬೇಕು. ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮತ್ತು ಭಕ್ತಿಯ ಸಾರವನ್ನು ಬಿತ್ತುವ ಕಾರ್ಯ ದೇವಸ್ಥಾನದ ಮೂಲಕ ನಡೆಯಬೇಕು. ಇಂತಹ ಕಾರ್ಯಗಳಿಂದ ಸಮಾಜದಲ್ಲಿ ನೈತಿಕ ಮೌಲ್ಯಗಳು ಬೆಳೆದು ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ಡಾ. ನವೀನ್ ಚಂದ್ರ ಶೆಟ್ಟಿಯವರು ತಿಳಿಸಿದರು.ಈ ಅನುದಾನವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೆ, ದೇವಸ್ಥಾನದಲ್ಲಿ ನಿತ್ಯ ಭಜನೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಕ್ಕಳಿಗೆ ಸಂಸ್ಕಾರ ಶಿಕ್ಷಣ ನೀಡುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಹಾಗೂ ಮಂಜುನಾಥ್, ಮಡಬಲು ಕಾರ್ಯಕ್ಷೇತ್ರದ ಗಣ್ಯರಾದ ಮಂಜುನಾಥ್, ಉದಯ್ ಕುಮಾರ್, ಶಿವರಾಜ್, ರಮೇಶ್, ಲಕ್ಷ್ಮಣ್, ಸುಂದರೆಗೌಡ, ಅಮೃತೇಗೌಡ, ಮಂಜೇಗೌಡ, ಹೇಮರಾಜ್ ಅಣ್ಣೇಗೌಡ, ನಂಜೇಗೌಡ, ಶಿವೇಗೌಡ, ನೇತ್ರಾವತಿ, ವಲಯದ ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿ ನಾಗರತ್ನ, ವಿ.ಎಲ್.ಇ. ಶ್ವೇತಾ ಹಾಗೂ ಗ್ರಾಮದ ಮುಖಂಡರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!