
ಕಾಫಿ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಡುಕೋಣ
ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ತಂಬಲಗೇರಿ ಗ್ರಾಮದಲ್ಲಿ ಕಾಡುಕೋಣ ರೈತರ ಕಾಫಿ ತೋಟದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದು ರೈತರು ಕಾಫಿ ತೋಟಕ್ಕೆ ಹೋಗಿ ಕೆಲಸ ಮಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ಗ್ರಾಮದಲ್ಲಿ ಕಾಡುಕೋಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಕಾರ್ಮಿಕರು ತೋಟಕ್ಕೆ ಬರುತ್ತಿಲ್ಲ ಎಂದು ಕಾಫಿ ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ ಜನವಸತಿ ಪ್ರದೇಶಗಳಿಗೆ ಆಗಮಿಸುತ್ತಿರುವ. ಕಾಡುಕೋಣಗಳ ಗುಂಪಿನಿಂದ ಬೇರ್ಪಟ್ಟ ಕಾಡುಕೋಣ ಮತ್ತೆ ಮತ್ತೆ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದು ಕಾಡುಕೋಣದ ಕಾಲು ಗಾಯಗೊಂಡಂತೆ ಕಾಣುತ್ತಿದ್ದು, ಸೂಕ್ತ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ ಫೋಟೋ ಮಾಹಿತಿ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ರೈತರ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಡುಕೋಣ
