ಮಹಿಳೆ ನಾಪತ್ತೆ

ಸಕಲೇಶಪುರ :ತಾಲೂಕಿನ ಬೈಕೆರೆ ಗ್ರಾಮದ ನಿವಾಸಿ ಮಮತ ಅವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ಈ ಕುರಿತು ಮಮತ ಅವರ ಕುಟುಂಬದವರು ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.ಮಮತ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣ ಸಕಲೇಶಪುರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪತ್ತೆ ಕಾರ್ಯಕ್ಕೆ ಸಹಕರಿಸುವಂತೆ ಪೊಲೀಸ್ ಇಲಾಖೆ ಹಾಗೂ ಕುಟುಂಬದವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ನಾಪತ್ತೆಯಾಗಿರುವ ಮಹಿಳೆಯ ಕುರಿತು ಮಾಹಿತಿ ಹೊಂದಿರುವವರು ಸಮೀಪದ ಪೊಲೀಸ್ ಠಾಣೆಗೆ ಅಥವಾ ಸಕಲೇಶಪುರ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!