ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸಕಲೇಶಪುರ: ತಾಲೂಕಿನ ಬಾಗೆ ಜೆ ಎಸ್ ಎಸ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಪರಮಪೂಜ್ಯ ಶ್ರೀ ಡಾ. ಡಿ.ವಿರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿರವರ ಮಾರ್ಗದರ್ಶನದಂತೆ ಇಂದು ರಾಜ್ಯಾದಂತ ” ಆನಲೈನ್ ಲೈವ್ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಈ ಕಾರ್ಯಕ್ರಮದಲ್ಲಿ. ಡಾ, ಡಿ, ವಿರೇಂದ್ರ ಹೆಗ್ಗಡೆ ರವರು ಮತ್ತು ಡಾ,ಶ್ರೀಮತಿ ಹೇಮಾವತಿ ಅಮ್ಮನವರು ಮತ್ತು ಹಿರಿಯ ಪೊಲಿಸ್ ಇಲಾಖೆ ಮತ್ತು ಆರೊಗ್ಯದಿಕಾರಿಗಳು ಆನ್ ಲೈನ್ ಮೂಲಕ ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ವಿರೊದಿ ಮತ್ತು ಸ್ವಾಸ್ಥ್ಯ ಸಂಕಲ್ಪ ನಿರ್ಮಾಣ ಮಾಡುವ ಬಗ್ಗೆ ಸಮಾಜದಲ್ಲಿ ಒಳ್ಳೆಯ ಆದರ್ಶ ವಿದ್ಯಾರ್ಥಿಗಳಾಗಿ,ಒಳ್ಳೆಯ ವ್ಯಕ್ತಿಯಾಗಿ ಆಗಬೇಕು ಹಾಗೂ ಮಾದಕ ದ್ರವ್ಯ ವಸ್ತುಗಳಿಂದ ದೂರವಿರಬೇಕು ಹಾಗೂ ಸ್ವಾಸ್ಥ್ಯ ಸಮಾಜವನ್ನು ಉಳಿಸಿಕೊಂಡು ಹೊಗುವ ಬಗ್ಗೆ, ಶಿಕ್ಷಣ,ಆರೊಗ್ಯದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ನಿಡಿದರು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸಬ್ ಇನ್ಸ್ಪೆಕ್ಟರ್ ಮಹೇಶ್ ಹಾಗೂ ಜೆ ಎಸ್ ಎಸ್ ಶಾಲೆಯ ಪ್ರಾಂಶುಪಾಲರಾದ ಶ್ರೀ ಮದುಕುಮಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ, ಬಾಗೆ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಹಾಗೂ ಯೋಜನಾಧಿಕಾರಿಗಳಾದ ರಾಜೇಶ್ ಎಂ.ಎಮ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜೆ ಎಸ್ ಎಸ್, ಶಾಲೆಯ ಶಿಕ್ಷಕರಾದ ಯೊಗೀಶ ,ಹಾಗೂ ಬಾಗೆ ವಲಯದ ಮೇಲ್ವಿಚಾರಕರಾದ ಶಿವಾನಂದ ಎಂ, ಈ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!