ಭಾರಿ ಗಾಳಿ ಮಳೆಗೆ ಧರೆಗೆ ಉರುಳಿದ ಬೃಹತ್ ಗಾತ್ರದ ಮರ

ಸಕಲೇಶಪುರ: ತಾಲೂಕಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಯಲ್ಲಿ ಬಿದ್ದಿದ್ದು ಸಂಚಾರಕ್ಕೆ ತೊಂದರೆ ಯಾಗಿದೆ. ಇದರಿಂದ ಈ ಭಾಗದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೂಡಲೇ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!