
ಸಕಲೇಶಪುರ: ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಯಲ್ಲಿ ಬಿದ್ದಿದ್ದು ಸಂಚಾರಕ್ಕೆ ತೊಂದರೆ ಯಾಗಿದೆ. ಇದರಿಂದ ಈ ಭಾಗದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೂಡಲೇ ಮರವನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಎಂಬ ಸುದ್ದಿಯನ್ನು ಪ್ರತಿಧ್ವನಿ ನ್ಯೂಸ್ ವರದಿ ಮಾಡಿದ ಬೆನ್ನೆಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ. ಕೂಡಲೇ ಸಕಲೇಶಪುರ ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಗಸ್ತು ಅರಣ್ಯ ಪಾಲಕರು ದೇವರಾಜ್, ಉಮೇಶ್ ಮತ್ತು RRT ಸಿಬ್ಬಂದಿ ಮದನ್, ಚಾಲಕ ಸೋಮಶೇಖರ್ ಹಾಗೂ ಶರೀಫ್,ವೆಂಕಟೇಶ್, ವಿಠಲ ಮತ್ತು ಗ್ರಾಮಸ್ಥರು ಇದ್ದರು.
