
ಸಕಲೇಶಪುರ : ಕರ್ನಾಟಕ ಸರ್ಕಾರದ ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಾಳೆ ಸಕಲೇಶಪುರಕ್ಕೆ ಭೇಟಿ ನೀಡಲಿದ್ದಾರೆ.ಭೇಟಿಯ ಸಂದರ್ಭದಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಪ್ರದೇಶಕ್ಕೆ ಭೇಟಿ ನೀಡಿ, ರಸ್ತೆ ಕಾಮಗಾರಿ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಸಚಿವರೊಂದಿಗೆ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಹೆದ್ದಾರಿಯ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.
