ಶ್ರೀ ಮುರಳಿ ಮೋಹನ್ ರವರ ಹುಟ್ಟುಹಬ್ಬದ ಪ್ರಯುಕ್ತ, ಬೃಹತ್ ಮೆಗಾ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಜುಲೈ 22ರಂದು ಬೃಹತ್ ಮೆಗಾ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ

ಸಕಲೇಶಪುರ, ಜು.16: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಅವರ ಹುಟ್ಟುಹಬ್ಬದ ಅಂಗವಾಗಿ, ಶ್ರೀ ಮುರುಳಿ ಮೋಹನ್ ಯುವ ಬ್ರಿಗೇಡ್ (ರಿ) ವತಿಯಿಂದ ಹಿಮ್ಸ್ ನ ತಜ್ಞ ವೈದ್ಯರ ಸಹಯೋಗದಲ್ಲಿ ಜುಲೈ 22ರಂದು ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಬೃಹತ್ ಮೆಗಾ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ.ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳು ಹಾಗೂ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!