ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಪರದಾಟ ಅಧಿಕಾರಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಸೈಯದ್ ಇದ್ರಿಸ್ ಆಕ್ರೋಶ

ಸಕಲೇಶಪುರ: ತಾಲೂಕು ಕಚೇರಿಯಲ್ಲಿ ತಮ್ಮ ವಿವಿಧ ಕೆಲಸಗಳಿಗಾಗಿ ಬೆಳಗ್ಗೆಯಿಂದಲೇ ಆಗಮಿಸಿದ್ದ ಸಾರ್ವಜನಿಕರು ಸೂಕ್ತ ಸೇವೆ ಸಿಗದೆ ಪರದಾಡಿದ ಘಟನೆ ನಡೆದಿದೆ. ಸಾರ್ವಜನಿಕರು ಹಲವು ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳಿಂದ ಸಮರ್ಪಕ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಲಾಗಿದೆ.ಈ ಕುರಿತು ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತ ಸೈಯದ್ ಇದ್ರೀಸ್ ತಾಲೂಕು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ಸರ್ವರ್ ಸಮಸ್ಯೆಯಿಂದ ಕೆಲಸಗಳು ನಡೆಯುತ್ತಿಲ್ಲ” ಎಂಬ ಉತ್ತರ ನೀಡಲಾಗಿದೆ ಎನ್ನಲಾಗಿದೆ.ಸಾರ್ವಜನಿಕರನ್ನು ನೆಲದಲ್ಲಿ ಕೂರಿಸಿಕೊಂಡು ಕಾಯುವಂತೆ ಮಾಡಿರುವುದು ಹಾಗೂ ಸಿಬ್ಬಂದಿಯ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೈಯದ್ ಇದ್ರೀಸ್, ಗ್ರಾಮೀಣ ಪ್ರದೇಶಗಳಿಂದ ಬರುವ ಜನರು ಪ್ರತಿದಿನ ಕಚೇರಿಗೆ ಅಲೆದಾಡುವಂತಾಗಿರುವುದು ವಿಷಾದನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ, ಯೂಥ್ ಕಾಂಗ್ರೆಸ್ ಅಧ್ಯಕ್ಷ ಧರ್ಮ ಮಾತನಾಡಿ ಸಿಎಂ ಡಿಕೆ ಶಿವಕುಮಾರ್ ಕಚೇರಿಗಳಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದು ರಾಜ್ಯ ಸರ್ಕಾರ ಈಗಾಗಲೇ ಸೂಚನೆ ನೀಡಿರುವುದನ್ನು ಉಲ್ಲೇಖಿಸಿ, ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!