

ಸಕಲೇಶಪುರ:- ತಾಲೂಕಿನ ಹೆಗ್ಗದ್ದೆ ವಲಯದ ಹಾನುಬಾಳು ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ), ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ, ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ, ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಸಂತೋಷ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ನಿಶ್ಚಯ್ ಇವರು ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ, ಪೌಷ್ಟಿಕ ಆಹಾರ ಸೇವಿಸುವ, ಪೌಷ್ಟಿಕ ಆಹಾರಲ್ಲಿ ಇರುವ ಪೊಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು. ಮೈಸೂರು ಪ್ರಾದೇಶಿಕ ಕಚೇರಿಯ, ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಮತಿ ಮೂಕಾಂಬಿಕ ಇವರು ಜ್ಞಾನವಿಕಾಸ ಕಾರ್ಯಕ್ರಮಗಳ ಬಗ್ಗೆ ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಯೋಜನಾಧಿಕಾರಿ ರಾಜೇಶ್ ಎಂ. ಇವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
