
ರೋಟರಿ ಸಂಸ್ಥೆ ಹಾನಬಾಳು ವತಿಯಿಂದ ಹುರುಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಹಾಗೂ ಗುರು ವಂದನನಾ ಕಾರ್ಯಕ್ರಮ
ಸಕಲೇಶಪುರ: ರೋಟರಿ ಸಂಸ್ಥೆ ಹಾನಬಾಳು ವತಿಯಿಂದ ಹುರುಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಹಾಗೂ ಗುರು ವಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಮಾತನಾಡಿದ ಹಾನುಬಾಳ್ ರೋಟರಿ ಸಂಸ್ಥೆಯ ಅಧ್ಯಕ್ಷ ಸಂದೇಶ್ ಕೀರ್ತಿ, ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಶಾಲೆಗೆ ಲ್ಯಾಪ್‌ಟಾಪ್, ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಡಿಕ್ಷನರಿಗಳು ಹಾಗೂ ಇತರೆ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ವಿದ್ಯಾಭ್ಯಾಸದ ಮೂಲಕ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು. ಗುರು ವಂದನೆ ಕಾರ್ಯಕ್ರಮದ ಅಂಗವಾಗಿ ಶಾಲೆಯ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಾನುಬಾಳ್ ರೋಟರಿ ಸಂಸ್ಥೆಯ ಕಾರ್ಯದರ್ಶಿ ನಿಶಾಂತ್ ಗಾಣದಹೊಳೆ , ಮಾಜಿ ಅಧ್ಯಕ್ಷ ಶಿವರಾಮಣ್ಣ ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
