
ಸಕಲೇಶಪುರ:ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 10 ಕೆ.ಜಿ ಗೆಡ್ಡೆಯನ್ನು ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯ ವೈದ್ಯರಾದ ಪುರುಷೋತ್ತಮ್ ಮಂಗಳವಾರ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.40 ವರ್ಷ ವಯಸ್ಸಿನ ಮಹಿಳೆಯು ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ವೈದ್ಯರಲ್ಲಿ ಪರೀಕ್ಷಿಸಿದಾಗ ಗೆಡ್ಡೆ ಇರುವುದು ಪತ್ತೆಯಾಯಿತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ತಂಡವು ಸುಮಾರು 10 ಕೆಜಿ ತೂಕದಷ್ಟು ಗೆಡ್ಡೆಯನ್ನು ಹೊರ ತೆಗೆದಿದ್ದಾರೆ.
