ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಸಕಲೇಶಪುರ: ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲೇಬೇಲೂರು ನಲ್ಲಿ ಇಂದು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ರಮೇಶ್ ಮಾತನಾಡಿ ಸ್ತನ್ಯಪಾನದ ಬಗ್ಗೆ ಸವಿವರವಾಗಿ ವಿವರಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀ ಮಾತನಾಡಿ ಸ್ತನ್ಯಪಾನದ ಮಹತ್ವ ಹಾಗೂ ಎದೆ ಹಾಲುಣಿಸುವ ಭಂಗಿಯ ಬಗ್ಗೆ ಸವಿವರವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ಸಿಬ್ಬಂದಿಯವರು, ಸಾರ್ವಜನಿಕರು ಹಾಗೂ ಬಾಣಂತಿಯರು ಇದ್ದರು.

Leave a Reply

Your email address will not be published. Required fields are marked *

error: Content is protected !!