ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಕಲೇಶಪುರ: ತಾಲೂಕಿನ ಬಾಳುಪೇಟೆ ಕಾರ್ಯಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ (ರಿ) ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಮ್ಮ ಐ ಕೇರ್ ಹಾಸ್ಪಿಟಲ್, ಹಾಗೂ H B ಟೆಸ್ಟ್, ಬಿ.ಪಿ ಶುಗರ್ ಟೆಸ್ಟ್ NCD ಗ್ರೂಪ್ ಆರೋಗ್ಯ ಇಲಾಖೆ ಇವರು ತಪಾಸಣೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀಯುತ ರಾಜೇಶ್ ಎಂ ಯೋಜನಾಧಿಕಾರಿಗಳು, ಶ್ರೀಯುತ, ಶಿವಪ್ರಕಾಶ ಆರೋಗ್ಯ ನಿರೀಕ್ಷಣಾಧಿಕಾರಿ, ಭಾಗವಹಿಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಹಾಗೂ ಕಣ್ಣಿನ ಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳನ್ನು, ಚಿಕಿತ್ಸೆಗೆ ಕರೆದುಕೊಂಡು ಹೋಗಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ವಲಯದ ಮೇಲ್ವಿಚಾರಕರು ಜ್ಯೋತಿ, , ಸೇವಾ ಪ್ರತಿನಿಧಿ ನಳಿನಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಮಂಜುಳ ಎಸ್.ಎಂ ಹಾಗೂ ಕೇಂದ್ರದ ಸದಸ್ಯರಗಳು, ಸಂಘದ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!